Breaking
10 May 2026, Sun

ಅಕ್ರಮ ಮರ ಸಾಗಾಟ ಪ್ರಕರಣ ಬೇಧಿಸಿದ ಹಿರಿಯಡ್ಕ ಠಾಣಾ ಪೊಲೀಸರು

ಉಡುಪಿ: ಅಕ್ರಮ ಮರ ಸಾಗಾಟ ಪ್ರಕರಣ ಹಿರಿಯಡ್ಕ ಠಾಣೆಯ ಪೊಲೀಸರು ಬೇಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾರಿಯ ಚಾಲಕ ಶೇಖ್ ಮಹಮ್ಮದ್ ನದೀಮ್ ನನ್ನು ಪೊಲೀಸರು ಬಂಧಿಸಿದ್ದಾರೆ

ಜನವರಿ 2 ರಂದು ಮಧ್ಯಾಹ್ನ 12:30ರ ಸುಮಾರಿಗೆ ಅಂಜಾರು ರಿಂಗ್ ರೋಡ್ ಬಳಿ ಹಿರಿಯಡ್ಕ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸುಮಾರು ಮೂರು ಯುನಿಟ್ ಮರಳು ಸಾಗಾಟ ಮಾಡಲಾಗುತ್ತಿದ್ದು, ಅದರ ಮೌಲ್ಯ ಸುಮಾರು 13000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಚೇರ್ಕಾಡಿ ಕನ್ನಾರು ಪೆಟ್ರೋಲ್ ಬಂಕ್ ಸಮೀಪದಿಂದ ಮರಳು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಚಾಲಕ ನನ್ನು ಬಂಧಿಸಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *