Breaking
10 May 2026, Sun

ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಆರೋಪಿಯ ಬಂಧನ

ಉಡುಪಿ: ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆ ಮಸೀದಿ ಬಳಿ ನಿವಾಸಿ ಅಬ್ದುಲ್ ರೌಫ್ (26) ಎಂದು ಗುರುತಿಸಲಾಗಿದೆ.

ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಸಾರ್ವಜನಿಕ ಪ್ರದೇಶವಾದ ಕರಂಬಳ್ಳಿ ರಾಮಬೆಟ್ಟು ಬಳಿ ಉಡುಪಿ ನಗರ ಪೊಲೀಸ್ ಠಾಣೆಯ ತಂಡ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಆಟೋವೊಂದನ್ನು ತಡೆದು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಆರೋಪಿಯ ಬಳಿ 7.59 ಗ್ರಾಂ ಎಂಡಿಎಂಎ ಪುಡಿ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 15,000 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯಿಂದ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ದ್ರವ್ಯಗಳು ಹಾಗೂ ಆಸ್ತಿಯ ಒಟ್ಟು ಮೌಲ್ಯ 3.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *