Breaking
22 Mar 2026, Sun

5 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಕಳೆದ 5 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಳ ಸಮೀಪದ ಕೈಕಂಬದಲ್ಲಿ ಡಿ. 5 ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಸಬಾ ಬೆಂಗರೆಯ ನೌಮಾನ್ (31) ಎಂದು ಗುರುತಿಸಲಾಗಿದೆ.

ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 5 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ಹಲವು ಬಾರಿ ವಾರೆಂಟ್ ಹೊರಡಿಸಿತ್ತು.

ಇದೀಗ ಡಿ. 5 ರಂದು ಕಾವೂರು ಠಾಣೆಯ ಪೊಲೀಸ್ ತಂಡವು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *