ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಉಡುಪಿಯ ಶ್ರೀ ಕೃಷ್ಣ ಮಠ ಸಮೀಪದಲ್ಲಿರುವ ಖಾಸಗಿ ಜಮೀನಿಗೆ ಬೆಂಕಿ ಹಚ್ಚಿದ ಘಟನೆ ಡಿ. 5 ರಂದು ನಡೆದಿದೆ.

ಮಾನಸಿಕ ಅಸ್ವಸ್ಥ ವ್ಯಕ್ತಿಯು ಖಾಸಗಿ ಆಸ್ತಿಗೆ ಬೆಂಕಿ ಹಚ್ಚಿದ ಪರಿಣಾಮ ಭೂಮಿ ಶಾಲೆ ಮತ್ತು ವಸತಿ ಮನೆಗಳಿಗೆ ಸಮೀಪದಲ್ಲಿರುವುದರಿಂದ ಕೆಲ ಸಮಯ ಆ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಆದರೆ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣ ಅಗ್ನಿಶಾಮಕದವರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.





