Breaking
4 Feb 2026, Wed

ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಕೆ. ಯು. ನೇಮಕ

ಕಾರ್ಕಳ: ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಕೆ. ಯು. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇವರು ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕಾರ್ಕಳದ ಎಎಸ್ಪಿಯಾಗಿದ್ದ ಡಾ. ಹರ್ಷಪ್ರಿಯಂವದ (ಐಪಿಎಸ್) ಅವರಿಗೆ ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ಬಡ್ತಿ ನೀಡಿ ವರ್ಗಾಯಿಸಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಬೆಳ್ಳಿಯಪ್ಪ ಅವರು ಈ ಹಿಂದೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಹಾಗೂ ಕುಂದಾಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸಿದ್ದಾರೆ.

ಮಾತ್ರವಲ್ಲ ಜಿಲ್ಲೆಯ ಹಲವು ಪ್ರಮುಖ ಹಾಗೂ ಸವಾಲಿನ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ತನಿಖಾಧಿಕಾರಿಯಾಗಿ ಆಗಿ ಬೆಳ್ಳಿಯಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದರು.

Leave a Reply

Your email address will not be published. Required fields are marked *