Breaking
22 Mar 2026, Sun

ಸಾರ್ವಜನಿಕರ ಕುಂದು-ಕೊರತೆ ಆಲಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು.

ಈ ವೇಳೆ ಬೆಳ್ತಂಗಡಿ, ಸುಳ್ಯ ಮುಂತಾದ ಪ್ರದೇಶಗಳಿಂದ ಬಂದಿದ್ದ ಸಾರ್ವಜನಿಕರು ಮತ್ತು ಕೃಷಿಕರು ಎದುರಿಸುತ್ತಿರುವ ಅಡ್ಡಿ-ಆತಂಕವನ್ನು ಸಂಸದರ ಮುಂದೆ ತೋಡಿಕೊಂಡರು.

ಇದಕ್ಕೆ ಸಂಸದ ಬ್ರಿಜೇಶ್ ಚೌಟ ಅವರು ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ನೀಡಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ, ರೈಲ್ವೆ ಇಲಾಖೆ, ಹೆದ್ದಾರಿ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದಿದ್ದಾರೆ.

ಇನ್ನು ಕೆಲವೊಂದು ಸಮಸ್ಯೆಗಳನ್ನು ಆಲಿಸಿದ ಸಂಸದರು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ.

Leave a Reply

Your email address will not be published. Required fields are marked *