ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ದಿನಾಚರಣೆಯ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ದಿನಾಚರಣೆಯ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಫೆ. 14ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಅಂಗಾರಕ ಸಂಕಷ್ಟಿ ಚತುರ್ಥಿಯ ಪರ್ವಕಾಲದಲ್ಲಿ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ರಂಗಪೂಜೆಯ ಸಂದರ್ಭದಲ್ಲಿ ಪ್ರಾರ್ಥಿಸಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ಟ, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್, ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೇಟಿ, ಕಿಶನ್ ಸೇಣವ, ಲಿಂಗಪ್ಪ ಧೋಟ, ಸುರೇಶ್ ಬಂಗೇರ, ರಾಮ ಬರೆ, ಕೇಶವ ಮಡಿವಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *