ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದೆ ನಿರಾಕರಣೆ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದ ನಿವಾಸಿ ಪವನ್ ಭಟ್ (24) ಎಂದು ಗುರುತಿಸಲಾಗಿದೆ.

ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪವನ್ ಭಟ್ ಅವರು ಅದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದರು. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಯುವತಿಯ ಮೇಲೆ ಒತ್ತಾಯ ಹಾಕಿದ್ದಾನೆ ಎನ್ನಲಾಗಿದೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ ಕಾರಣ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





