Breaking
10 May 2026, Sun

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು: ಇಬ್ಬರು ಸಜೀವ ದಹನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡ ಘಟನೆ ಜ.6 ತಡರಾತ್ರಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಸಮೀಪದ ಕಂದಕಕ್ಕೆ ಉರುಳಿಬಿದ್ದಿದೆ. ಈ ವೇಳೆ ಕಾರಿಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಕಾರಿನಲ್ಲಿದ್ದ ಇಬ್ಬರು ಹೊರಬರಲು ಸಾಧ್ಯವಾಗದೆ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *