ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ 16ನೇ ಫ್ಲೋರ್ ನಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿಯೊಬ್ಬರು 16ನೇ ಫ್ಲೋರ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ (26) ಮೃತ ಯುವಕನಾಗಿದ್ದಾನೆ.

ಈತ ನಗರದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್ ನ 20ನೇ ಮಹಡಿಯ ಫ್ಲಾಟ್ ನಲ್ಲಿ ವಾಸವಿದ್ದ. ಆದರೆ ಬುಧವಾರ ಬೆಳಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿಕ್ಷೇಪ್ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಬಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *