ಬೆಳ್ತಂಗಡಿ: ಗುಡ್ಡದ ಪ್ರದೇಶದಲ್ಲಿ ಬಿಸಿಲಿಗೆ ಒಣಗಿ ನಿಂತಿದ್ದ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ಪೆಟ್ರೋಲ್ ಪಂಪು ಮುಂಭಾಗದ ಗುಡ್ಡದಲ್ಲಿ ಜ. 8 ಮಧ್ಯಾಹ್ನದ ವೇಳೆ ನಡೆದಿದೆ.

ಕ್ಷಣಾರ್ಥದಲ್ಲಿ ಅರ್ಧಕ್ಕೂ ಹೆಚ್ಚು ಗುಡ್ಡ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಳ್ಳುತ್ತಿದ್ದಂತೆ ಗುಡ್ಡದ ಕೆಳಭಾಗದಲ್ಲಿರುವ ಬಣವಿಗಳಿಗೆ ಬೆಂಕಿ ಹೊತ್ತುಕೊಳ್ಳುತ್ತೆ ಎಂದುಕೊಂಡ ಅಲ್ಲಿನ ಸ್ಥಳೀಯರು ಕೂಡಾ ಬಕೆಟ್ ಮೂಲಕ ನೀರನ್ನು ತೆಗೆದುಕೊಂಡು ಬೆಂಕಿಯನ್ನು ಹಾರಿಸಲು ಮುಂದಾಗಿದ್ದಾರೆ.

ಆದ್ರೆ ಗುಡ್ಡಕ್ಕೆ ಹೊತ್ತಿಕೊಂಡ ಬೆಂಕಿ ಪ್ರಖರತೆ ಹೆಚ್ಚಾಗಿದ್ದನ್ನು ಮನಗಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ಪೂರ್ವದಲ್ಲಿ ಗುಡ್ಡದಲ್ಲಿನ ಅನೇಕ ಗಿಡಮರಗಳು ಬೆಂಕಿಗೆ ಸುಟ್ಟು ಕರಕಲಾಗಿವೆ.

ಬಳಿಕ ಮಾಹಿತಿ ಇಳಿದು ತಕ್ಷಣಕ್ಕೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಗಳ ಈ ಕಾರ್ಯಕ್ಷಮತೆಯ ಬಗ್ಗೆ ಸ್ಥಳೀಯರು ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ.
ವಿದ್ಯುತ್ ಅವಘಡದಿಂದ ಈ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.



