ವಿಟ್ಲ: ಹಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ ( 30) ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರಿಗೆ ಸೇರಿದ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





