Breaking
10 May 2026, Sun

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಬರಹ: ಭಾಗೀರಥಿ ಮುರುಳ್ಯ ಪರ ಬಿಜೆಪಿ ಎಸ್ಸಿ ಮೋರ್ಚಾ ದೂರು

ಸುಳ್ಯ: ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರಹ ಪ್ರಕಟಿಸಿರುವುದನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಅವರಿಗೆ ದೂರನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ, ಉಪಾಧ್ಯಕ್ಷ ರಾಘವ ಕಲ್ಮಂಜ, ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಬೈರ, ಜಿಲ್ಲಾ ಕಾರ್ಯದರ್ಶಿ ವಸಂತಿ ಮೆಚ್ಚಿನ, ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿ ತುಳಸಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಆಶಾ, ಚಂಚಲಾಕ್ಷಿ , ಮಂಜುಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *