Breaking
25 Sep 2026, Fri

ಉಚ್ಚಿಲದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ, ಆಸ್ಪತ್ರೆಗೆ ಸಾಗಿಸುವಾಗ ಸಾವು

ಉಡುಪಿ: ಪಾದಚಾರಿಯೊಬ್ಬರು ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಉಡುಪಿಯ ಉಚ್ಚಿಲ ಬಸ್ಸು ನಿಲ್ದಾಣದ ಬಳಿ ರಾ.ಹೆ 66ರಲ್ಲಿ ನಡೆದಿದೆ.

ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್(65) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಸದಾಶಿವ ಕೋಟ್ಯಾನ್ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಮೂಳೂರಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಯಿಂದ ಹೊಟೇಲಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *