ಬಂಟ್ವಾಳ: ಪೂಂಜದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಇದರ 46ನೇ ವರ್ಷದ ಭಜನಾ ಮಂಗಲೋತ್ಸವವು ಜ. 13 ರಿಂದ 15 ರವರೆಗೆ ನಡೆಯಲಿದೆ.
ಜ. 13 ರಂದು ಬೆಳಿಗ್ಗೆ 9 ಗಂಟೆಗೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಗಣಹೋಮ, ಮಧ್ಯಾಹ್ನ ಪ್ರಸನ್ನ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ‘ಶ್ರೀನಿವಾಸ ಕಲ್ಯಾಣೋತ್ಸವ’ ಹಾಗೂ ರಾತ್ರಿ 8.30 ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಜ. 14 ರಂದು ಬೆಳಿಗ್ಗೆ 9.30 ಕ್ಕೆ ತಾಳಮದ್ದಳೆ ಪ್ರಸಂಗ ಭಕ್ತ ಸುಧನ್ವ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.30 ಕ್ಕೆ ಭಜನೆ ನಡೆಯಲಿದ್ದು ರಾತ್ರಿ 8 ಗಂಟೆಗೆ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಜ. 15 ರಂದು ಬೆಳಿಗ್ಗೆ 6.30ಕ್ಕೆ “ಮಂಗಳ” ನಡೆಯಲಿದೆ.
ಈ ಭಜನಾ ಮಂಗಲೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




