Breaking
22 Mar 2026, Sun

‌ದಾರಿ ಮಧ್ಯೆ ಆಕಸ್ಮಿಕವಾಗಿ ಹೊತ್ತಿ ಉರಿದ ಲಾರಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿಹೊತ್ತಿಕೊಂಡ ಘಟನೆ ಜ.10 (ಇಂದು) ನಡೆದಿದೆ.

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಆದರೆ ಆದಾಗಲೇ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *