Breaking
25 Sep 2026, Fri

ಉದ್ಯಮಿ ಧಾರ್ಮಿಕ ಮುಂದಾಳು ಬಾಲಕೃಷ್ಣ ಶೆಟ್ಟಿ ಸಾಲೆತ್ತೂರು ನಿಧನ

ಬಂಟ್ವಾಳ : ಸಾಲೆತ್ತೂರು ಸಮೀಪದ ಗೌರಿಕೋಡಿ ನಿವಾಸಿ, ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (76) ಇವರು ಅಸೌಖ್ಯದಿಂದ ಜ.7 ರಂದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ರಾಜಕೀಯ ಮತ್ತು ಉದ್ಯಮ ಕ್ಷೇತ್ರ ಸಹಿತ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರಿಗೆ ಮಾಜಿ ಸಚಿವ ಬಿ.ರಮಾನಾಥ ರೈ, ತಾ.ಪಂ.ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ ಮತ್ತಿತರ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿ ಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *