Breaking
25 Sep 2026, Fri

ಮಣಿಪಾಲದಲ್ಲಿ ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಸಾವು

ಮಣಿಪಾಲ: ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ತಡರಾತ್ರಿ ನಡೆದಿದೆ.

ಮೃತನನ್ನು ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.

ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದೂವರೇ ವರ್ಷದ ಹಿಂದೆಯಷ್ಟೇ ಯುವತಿಯೋರ್ವಳನ್ನು ಪ್ರೀತಿಸಿ ಮದುವೆ ಆಗಿದ್ದರು.

ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *