ಮಂಗಳೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಡಿ. 9 ರಂದು ನಡೆದಿದೆ.
ಮೃತಪಟ್ಟ ಯುವಕನನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.

ಜ. 5 ರಂದು ರಾತ್ರಿ ಮಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ತಮ್ಮ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೀರಿ ಸಮೀಪದ ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಮಹಾಝ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ಚಿಕಿತ್ಸೆಗೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



