ಲಾರಿಯೊಂದು ಜೀಪಿಗೆ ಡಿಕ್ಕಿ: ಚಾಲಕ ಅಪಾಯದಿಂದ ಪಾರು

ಮಂಗಳೂರು: ಅಡ್ಯಾರ್ ಸೋಮನಾಥ ಕಟ್ಟೆ ಬಳಿ ಲಾರಿಯೊಂದು ಜೀಪಿಗೆ ಡಿಕ್ಕಿ ಹೊಡೆದ ಘಟನೆ ಜ. 10 ರಂದು ನಡೆದಿದೆ.

ಸರಕು ಸಾಗಣೆಯ ಲಾರಿಯು ಜೀಪಿನ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜೀಪ್‌ ಡಿವೈಡರ್ ಮೇಲೆ ಏರಿದ್ದು, ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಅದೃಷ್ಟವಶಾತ್, ಈ ಅಪಘಾತದಲ್ಲಿ ಜೀಪಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *