Breaking
24 Jun 2026, Wed

ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯಲ್ಲಿ ಯುವಕ ಶವವಾಗಿ ಪತ್ತೆ

ಬೆಳ್ತಂಗಡಿ: ಯುವಕನೋರ್ವ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯಲ್ಲಿ ಜ.11 ರಂದು ಕಂಡು ಬಂದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಯುವಕನಾಗಿದ್ದಾನೆ.

ಅಭಿಷೇಕ್ ಸಕಲೇಶಪುರ ಜ.9 ಕ್ಕೆ ನಾಪತ್ತೆಯಾಗಿದ್ದು ನೇರ ಧರ್ಮಸ್ಥಳದ ನೇತ್ರಾವತಿ ನದಿಗೆ ಬಂದು ಮನೆಯವರಿಗೆ ‘ನನಗೆ ಸಾಲದ ಒತ್ತಡ ಜಾಸ್ತಿಯಾಗುತ್ತಿರುವ ಕಾರಣದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ’ ಮೆಸೇಜ್ ಮಾಡಿ ಬಳಿಕ ಕರೆ ಮೂಲಕ ‘ನಾನು ಧರ್ಮಸ್ಥಳದ ನೇತ್ರಾವತಿ ನದಿ ಬಳಿ ಬಂದಿದ್ದು ನಾನು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ಈ ವಿಚಾರವಾಗಿ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಮನೆಯವರು ದೂರು ನೀಡಿದ್ದಾರೆ. ಬಳಿಕ ನೇರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ನದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಜ.11 ರಂದು ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಅಭಿಷೇಕ್ ಮೃತದೇಹ ಕುಟುಂಬ ಸದಸ್ಯರಿಗೆ ಪತ್ತೆಯಾಗಿದೆ.

ಈ ಬಗ್ಗೆ ಮೃತನ ಸಹೋದರ ಭರತ್.ಬಿ.ಎಮ್ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *