Breaking
25 Sep 2026, Fri

ಎರಿಮಲೆ ಬೆಟ್ಟ ಏರುತ್ತಿದ್ದಾಗ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತದಿಂದ ಸಾವು

ಅರ್ಕುಳ: ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಎಂದು ಗುರುತಿಸಲಾಗಿದೆ. ಅವರು ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಜ. 10 ರಂದು ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ತೆರಳುತ್ತಿದ್ದ ವೇಳೆ ಅಚಾನಕ್ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *