Breaking
10 May 2026, Sun

ಮಾದಕ ದ್ರವ್ಯವನ್ನು ಸರಬರಾಜು ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯ ಬಂಧನ

ಮಂಗಳೂರು: ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ವ್ಯವಸ್ಥಿತ ರೀತಿಯಲ್ಲಿ ಮಾದಕ ದ್ರವ್ಯಗಳನ್ನು ತರಿಸಿ ಮಂಗಳೂರು ನಗರದ ಯುವಕರಿಗೆ ವಿತರಿಸುತ್ತಿದ್ದರು ಎನ್ನಲಾಗಿದೆ.

ಆರೋಪಿಯಿಂದ 4 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ ಸುಮಾರು 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *