Breaking
25 Sep 2026, Fri

ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಹಾಗೂ ಯಕ್ಷಗಾನ ಆಮಂತ್ರಣ ಬಿಡುಗಡೆ

ಬಂಟ್ವಾಳ: ಸಜೀಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಕ್ಷೇತ್ರದಲ್ಲಿ ಜ. 12 ರಂದು ಶ್ರೀ ದೇವರಿಗೆ ವಿಶೇಷ ರಂಗ ಪೂಜೆ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಫೆ. 13 ರಂದು ಶ್ರೀ ಕ್ಷೇತ್ರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಲಿದ್ದು ಇದರ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ವೇಳೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ದೇವಸ್ತಾನ ಸೇವಾ ಟ್ರಸ್ಟ್ ಅಧ್ಯಕ್ಷ. ಕೆ ರಾಧಾಕೃಷ್ಣ ಆಳ್ವ, ಗಣೇಶ್ ಶೆಟ್ಟಿ, ಬಾಲ ಗಣಪತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು, ಮನೋರಂಜನ್ ಶೇಖ, ಸುಧಾಕರ ಕೇಟಿ, ಕಿಶನ್ ಸೇಣವ, ಪ್ರಮೋದ್, ಸೋಮನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *