Breaking
25 Sep 2026, Fri

ಮದ್ದಡ್ಕದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ, ರಸ್ತೆ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯೊಂದಕ್ಕೆ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ಬಿದ್ದ ಕಾರಣದಿಂದ ಜನ ಮತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಜ.13 ರಂದು ನಡೆದಿದೆ.

ವಿದ್ಯುತ್ ತಂತಿ ತುಂಡಾಗಿ ಬಿದ್ದ ಕಾರಣದಿಂದ ರಸ್ತೆ ಸಂಚಾರದಲ್ಲಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದ್ದು ಇದರಿಂದ ಟ್ರಾಫಿಕ್ ಜಾಮ್ ಆಗಿದೆ.

ಪುತ್ತೂರು ಭಾಗಕ್ಕೆ ವಿದ್ಯುತ್ ಪೂರೈಸುವ ಹೈ ಟೆನ್ಶನ್ ತಂತಿ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಮೆಸ್ಕಾಂ ಸಿಬ್ಬಂದಿಗಳು ತಂತಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *