Breaking
24 Jun 2026, Wed

ಕಂಬಳ ಆಯೋಜಕ , ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಕಾರು ಅಪಘಾತ

ಮಂಗಳೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಘಟನೆ ಮಂಗಳೂರು ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂಟುಗೋಳಿ ಸಮೀಪ ಜ. 13 ರ ನಸುಕಿನ ಜಾವ ನಡೆದಿದೆ.

ಕಂಬಳ ಆಯೋಜಕರಾಗಿ ಗುರುತಿಸಿಕೊಂಡಿರುವ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಕಾರು ಮನೆಯತ್ತ ತೆರಳುವ ಸಂದರ್ಭ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಾಂತ್ ಅವರು ಮಂಗಳೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು, ಚಾಲನೆಯಲ್ಲಿದ್ದ ಪ್ರಶಾಂತ್ ಕಾಜವ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.

Leave a Reply

Your email address will not be published. Required fields are marked *