ಮಂಗಳೂರು: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಬೋಂದೆಲ್ ಏರ್‌ಪೋರ್ಟ್ ರೋಡ್‌ನಲ್ಲಿ ನಡೆದಿದೆ.

ಅತಿ ವೇಗದಿಂದ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಗಾಜುಗಳು ಪುಡಿಪುಡಿಯಾಗಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದೆ.
ಗಂಭೀರ ಗಾಯಗೊಂಡವರನ್ನು ಮಹಿಳೆಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.




