Breaking
24 Jun 2026, Wed

ಬೆಳ್ತಂಗಡಿಯಲ್ಲಿ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆ

ಬೆಳ್ತಂಗಡಿ: ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಪಂಚಾಯತ್ ವ್ಯಾಪ್ತಿ ಓಡಿಲ್ನಾಳ ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ನಡೆದಿದೆ.

ನಾಪತ್ತೆಯಾದ ಬಾಲಕನನ್ನು ಸುಬ್ರಹ್ಮಣ್ಯ ನಾಯಕ್ ಎಂಬವರ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸುಮಂತ್ (16) ಎಂದು ಗುರುತಿಸಲಾಗಿದೆ.

ಪ್ರತಿದಿನ ಸ್ನೇಹಿತರ ಜತೆ ತೆರಳುತ್ತಿದ್ದ ಸುಮಂತ್ ಇಂದು ಬಾರದೆ ಇರುವ ಕುರಿತು ಸ್ನೇಹಿತರಿಂದ ಮಾಹಿತಿ ಬಂದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳದ ಪ್ರದೇಶದ ತೋಟದ ಕೆರೆಯ ಬದಿಯಲ್ಲಿ ರಕ್ತದ ಕಲೆಗಳು ಕಾಣಿಸುತ್ತಿದ್ದು, ಚಿರತೆಗಳ ಓಡಾಟ ಇರುವುದರಿಂದ ಆತಂಕ ಸೃಷ್ಟಿಯಾಗಿದೆ.

ಆತಂಕಗೊಂಡ ಗ್ರಾಮದ ನೂರಾರು ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು, ಅಗ್ನಿಶಾಮಕ ದಳದವರು ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *