ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರೊಂದು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ಸುಳ್ಯದ ಕೊಯನಾಡು ಬಳಿ ನಡೆದಿದೆ.

ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಕೊಯನಾಡು ಮೇಲಿನ ಪೋಸ್ಟ್ ಆಫೀಸ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಈ ಅಪಘಾತ ಸಂಭವಿಸಿದೆ.
ವಾಹನದಲ್ಲಿದವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.





