Breaking
4 Feb 2026, Wed

ಕೋಲಾರ: ಪ್ರೀತಿಸುತ್ತಿದ್ದ ಯುವತಿಯನ್ನು ಕೊಂದ ಪ್ರಿಯಕರ

ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಪ್ರಿಯಕರನೊಬ್ಬ ಪ್ರೀತಿಸುತ್ತಿದ್ದ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು (ಜ.15) ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಸುಜಾತಾ (27) ದಾಸರಹೊಸಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅವರು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು.

ಯಳಬುರ್ಗಿ ಗ್ರಾಮದ ಚಿರಂಜೀವಿ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಸುಜಾತಾ ಇಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬಂಗಾರಪೇಟೆ ರಸ್ತೆಯಲ್ಲಿ ಆರೋಪಿ ಚಿರಂಜೀವಿ ಅವರನ್ನು ಭೇಟಿಯಾಗಿದ್ದಾನೆ. ಈ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಘಟನೆಯ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಜಮಾಯಿಸಿ ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *