ಮೂಡುಬಿದಿರೆ: ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ , ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವು ನವೆಂಬರ್ 29ರಂದು ನಡೆಯಲಿದೆ.
ಈ ವರ್ಷದ ಪ್ರಶಸ್ತಿಯನ್ನು ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲು ಇವರಿಗೆ ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.