Breaking
9 Aug 2026, Sun

ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ.

ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸುತ್ತಿದ್ದ ಆರೋಪಿಗಳನ್ನು ಮಂಗಳೂರು ತಾಲೂಕಿನ ಮೂಡುಪೆರಾರ್ ಗ್ರಾಮದ ಗಂಜಿಮಠ ಬಸ್ಸು ನಿಲ್ದಾಣದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕುರಿತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *