ಉಡುಪಿಯಲ್ಲಿ ಪತಿ ಶಬರಿಮಲೆಗೆ ಹೋಗಿದ್ದ ಸಂದರ್ಭದಲ್ಲಿ ಪತ್ನಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆ

ಉಡುಪಿ: ಪತಿ ಶಬರಿಮಲೆಗೆ ಹೋಗಿದ್ದ ಸಂದರ್ಭದಲ್ಲಿ ಪತ್ನಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ನಾಪತ್ತೆಯಾದವರನ್ನು ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನ ಸಂತೋಷ ನಗರ ನಿವಾಸಿ ಸಂಜೀವ ಎಂಬವರ ಪತ್ನಿ ಮಂಜುಳಾ(22), ಮಕ್ಕಳಾದ ಸಮೀಕ್ಷಾ(4) ಮತ್ತು ಅಪೇಕ್ಷಾ(2) ಎಂದು ಗುರುತಿಸಲಾಗಿದೆ.

ಪತಿ ಸಂಜೀವ ಅವರು ಶಬರಿಮಲೆ ಯಾತ್ರೆಗೆ ತೆರಳಿದ್ದರು. ಈ ವೇಳೆ ಜ.13ರಂದು 10 ಗಂಟೆಯಿಂದ ಜ.14ರ ಬೆಳಗ್ಗೆ 5 ಗಂಟೆ ಅವಧಿಯಲ್ಲಿ ನಾಪತ್ತೆಯಾಗಿದ್ದಾರೆ. ಸಂಬಂಧಿಕರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *