ಕಾರ್ಕಳ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ನಷ್ಟ ಸಂಭವಿಸಿದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.

ಇಲ್ಲಿನ ಮುದ್ದಣ್ಣ ನಗರದ ನಿವಾಸಿ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ.

ಸ್ಫೋಟಕ್ಕೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ ಎಂದು ತಿಳಿದು ಬಂದಿದೆ. ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.






