Breaking
24 Jun 2026, Wed

ಎಮ್‌ಡಿಎಂಎ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಬಂಧನ

ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳದ ನಂದಾವರ ಸಜೀಪ ಮುನ್ನೂರು ನಿವಾಸಿ ಇಮ್ಮಿಯಾಜ್ ಯಾನೆ ಮೊಹಮ್ಮದ್ ಇಮ್ಮಿಯಾಜ್ (40 ವ) ಎಂದು ಗುರುತಿಸಲಾಗಿದೆ.

ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಮ್.ಡಿ.ಎಮ್.ಎ ಮಾರಾಟ ಮಾಡಲಾಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ 65,000 ರೂಪಾಯಿ ಮೌಲ್ಯದ 13 ಗ್ರಾಂ ತೂಕದ ಎಮ್.ಡಿ.ಎಮ್.ಎ, 2 ಸಾವಿರ ರೂಪಾಯಿ ನಗದು, ಮೊಬೈಲ್ ಫೋನ್, ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *