ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದರೂ, ಅದನ್ನು ಸ್ಥಳಾಂತರಿಸಲು ಬಾರದ ಅಧಿಕಾರಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ನಡೆದಿದೆ.

ಕಳೆದ ಕೆಲವು ದಿನಗಳಿಂದ ಹರದಗೆರೆ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯು ಹರದಗೆರೆಯ ಬೋವಿ ಕಾಲೋನಿಯ ಗೋವಿಂದಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಬೋನು ಅಳವಡಿಸಿತ್ತು. ಶುಕ್ರವಾರ ರಾತಿಯ ವೇಳೆ ಈ ಬೋನಿಗೆ ಚಿರತೆ ಲಾಕ್ ಆಗಿದೆ.

ಚಿರತೆ ಬೋನಿಗೆ ಬಿದ್ದ ವಿಷಯ ತಿಳಿದರೂ ಗುಬ್ಬಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕರು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅಧಿಕಾರಿಗಳು ಲಭ್ಯವಾಗುತ್ತಿಲ್ಲ.

ಅರಣ್ಯ ಇಲಾಖೆಯ ನಿರ್ಲಕ್ಷ ತನಕ್ಕೆ ಹರದಗೆರೆ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಕೂಡಲೇ ಚಿರತೆಯನ್ನು ಸ್ಥಳಾಂತರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.


