Breaking
24 Jun 2026, Wed

ಸರಪಾಡಿ ಅರಮನೆಯ ನರಸಿಂಹ ಐತಾಳ್ ನಿಧನ

ಬಂಟ್ವಾಳ: ಸರಪಾಡಿ ಅರಮನೆಯ ನರಸಿಂಹ ಐತಾಳ್(86) ಅವರು ಜ. 17 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ನರಸಿಂಹ ಐತಾಳ್ ಅವರು ಮಾವಿನಕಟ್ಟೆ ಸರಕಾರಿ ಶಾಲೆಯಲ್ಲಿ ಸುದೀರ್ಘ ವರ್ಷಗಳ ಕಾಲ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೊದ್ಧಾರ ಸಮಿತಿ, ಜಾತ್ರೋತ್ಸವ ಸಮಿತಿಯ ಗೌರವ ಸಲಹೆಗಾರರಾಗಿ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷರಾಗಿ ಪ್ರತಿ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದ್ದರು. ಜೊತೆಗೆ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ಗ್ರಾಮದ ಪ್ರತಿ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡು ವಿಶೇಷ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *