Breaking
24 Jun 2026, Wed

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಮಂಗಳೂರು: ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಜ.17 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕದ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *