ಮೂಡಬಿದಿರೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ ರಿಂಗ್‌ರೋಡ್ ಬಳಿ ನಡೆದಿದೆ.
ಮೃತಪಟ್ಟ ಯುವಕನನ್ನು ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಎಂದು ಗುರುತಿಸಲಾಗಿದೆ. ಅವರು ಮೂಡುಬಿದಿರೆ ರಿಂಗ್ ರೋಡ್‌ನ ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ಬಳಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ.

ದೀಕ್ಷಿತ್ ಅವರು ಹಲವು ವರ್ಷಗಳ ಕಾಲ ದುಬೈನಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ವರ್ಷದ ಹಿಂದೆ ತವರಿಗೆ ಮರಳಿದ್ದರು. ಮೂಡುಬಿದಿರೆಯ ರಿಂಗ್‌ರೋಡ್ ಬಳಿ ಹೋಟೆಲ್ ಉದ್ಯಮ ಆರಂಭಿಸುವ ಆಸೆ ಹೊಂದಿದ್ದ ಅವರು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು.

ಆದರೆ ಜ.17 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮಲಗಿದ್ದ ವೇಳೆ, ಮನೆಯ ಕೋಣೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.




