Breaking
24 Jun 2026, Wed

ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನ ಯತ್ನ: ಆರೋಪಿಯ ಬಂಧನ

ಕಾರ್ಕಳ: ತಾಲೂಕಿನ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಿಟ್ಟೆ ಗ್ರಾಮದ ಸುರೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಜ. 16 ರಂದು ಆರೋಪಿಯು ಸಹಕಾರಿ ಸಂಘದ ಬೀಗ ಮುರಿದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದನು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಯ ವಿರುದ್ಧ ಕಾರ್ಕಳ, ಪಡುಬಿದ್ರಿ, ಬೆಳ್ತಂಗಡಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಕಳ್ಳತನದ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *