Breaking
24 Jun 2026, Wed

ಖಾಲಿ ಮನೆಗಳನ್ನೇ ಗುರಿಯಾಗಿಸಿ ಕಳ್ಳತನ: ಪಶ್ಚಿಮ ಬಂಗಾಳ ಮೂಲದ ಆರೋಪಿಯ ಬಂಧನ

ಕಾರ್ಕಳ: ಹಲವು ದಿನಗಳಿಂದ ಬೀಗ ಹಾಕಿರುವ ಖಾಲಿ ಮನೆಗಳನ್ನು ಗುರುತಿಸಿ ಬೀಗ ಒಡೆದು ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಪ್ರಸ್ತುತ ಮಂಗಳೂರಿನ ಗಂಜಿಮಠ, ಮೊಗರು ಗ್ರಾಮದ ನಿವಾಸಿ ಮನೋತೋಷ್ ಕಾಯಲ್(39) ಎಂದು ಗುರುತಿಸಲಾಗಿದೆ.

ಹಲವು ದಿನಗಳಿಂದ ಬೀಗ ಹಾಕಿರುವ ಖಾಲಿ ಮನೆಗಳನ್ನು ಗುರುತಿಸಿ ಬೀಗ ಒಡೆದು ಕಳ್ಳತನ ನಡೆಸಿದ್ದ ಈತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯು ಮನೆಯಲ್ಲಿದ್ದ ಬ್ಯಾಟರಿಯನ್ನು ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *