ಸುಳ್ಯ: ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಸುಜಿತ್ (28) ಮತ್ತು ಗೋಪಾಲ್ ನಾಯರ್ ಎಂಬವರ ಮಗ ಹರಿಪ್ರಸಾದ್ (39) ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯದ ಕುಲ್ಕುಂದ ಎಂಬಲ್ಲಿ ಕುಮಾರಧಾರಾ ನದಿಗೆ ಸುಜಿತ್ ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ ಆತನಿಗೆ ಈಜು ಬಾರದೇ ನೀರಿನಲ್ಲಿ ಮುಳುಗಿದ್ದು ಆತನನ್ನು ರಕ್ಷಿಸಲು ಹರಿಪ್ರಸಾದ್ ಕೂಡ ನದಿ ನೀರಿಗೆ ಇಳಿದಿದ್ದಾರೆ. ಆದರೆ ಇಬ್ಬರೂ ನೀರಿನಿಂದ ಮೇಲಕ್ಕೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಕುರಿತು ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




