Breaking
22 Mar 2026, Sun

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

ಉಡುಪಿ : ಉಡುಪಿಯ ಕೋಟಕಾರ್ಕಡ ಗ್ರಾಮದ ರಿಶಿ ಆಟೋ ವೆಲ್ಡಿಂಗ್ ವರ್ಕಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪಾದಾಚಾರಿ ಮೃತಪಟ್ಟ ಘಟನೆ ಜ.16 ರಂದು ನಡೆದಿದೆ.

ಇಂಟಿರಿಯಲ್ ಡಿಸೈನ್ ಕೆಲಸ ಮಾಡಿಕೊಂಡಿದ್ದ ಪ್ರದೀಪ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರು, ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ಪ್ರದೀಪ ಹಾಗೂ ಶಶಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆದಾಗಲೇ ಪ್ರದೀಪ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *