ಕಾಸರಗೋಡು: ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಗರದ ಹಳೆಯ ಬಸ್ ನಿಲ್ದಾಣ ಸಮೀಪದಲ್ಲಿರುವ ಲೂಮ್ಸ್ ಬೇಕರಿಯಲ್ಲಿ ಜ. 18 ರಂದು ನಡೆದಿದೆ.

ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಬೇಕರಿಯ ಕೂಲ್ ಬಾರ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಬೇಕರಿಯ ಒಳಸಾಮಗ್ರಿ ಹಾಗೂ ಉಪಕರಣಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.






