Breaking
25 Sep 2026, Fri

ಮರದ ಗೆಲ್ಲು ವಿಚಾರಕ್ಕೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿ ಕೊಲೆ ಮಾಡಿದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ ಜ. 19 ರಂದು ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.

ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 2020ರ ಎಪ್ರಿಲ್ 29ರಂದು ಆರೋಪಿಯು ಮನೆ ಸಮೀಪದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜ ಹಾಗೂ ಅವರ ಪತ್ನಿ ಹೆಲೆನ್ ಡಿಸೋಜ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಅವರನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ. ಈ ಪ್ರಕರಣದ ತನಿಖೆಯನ್ನು ಮುಲ್ಕಿ ಠಾಣೆಯ ನಿರೀಕ್ಷಕ ಜಯರಾಮ ಡಿ.ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಜೊತೆಗೆ
2 ಲಕ್ಷ ರೂ. ದಂಡ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *