Breaking
22 Mar 2026, Sun

ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

ವಿಟ್ಲ: ಇಪ್ಪತ್ತು ಅಂಶಗಳ ಕಾರ್ಯಕ್ರಮಗಳ ಮೂಲಕ ದೇಶದ ಬಡ ಹಿಂದುಳಿದ ಶೋಷಿತ ಜನರ ಏಳಿಗೆಗೆ ಶ್ರಮಿಸಿದ ಮಹಾನ್ ನಾಯಕಿ ಎಂದು ಕಾಂಗ್ರೆಸ್ ವಕ್ತಾರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ಹೇಳಿದರು.

ಅವರು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ_ಅವರ _ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ಭೂ ಮಸೂದೆಯಂತಹ ಕಾನೂನಿನ ಮೂಲಕ ಜನಪರ ಹೋರಾಡಿದರು. ಬಡವರ ಬಂಧು ಇಂದಿರಾಗಾಂಧಿ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಂ. ಎಸ್. ಮಹಮ್ಮದ್ ಮಾತನಾಡಿ ದೇಶಕ್ಕೆ ಇಂದಿರಾಗಾಂಧಿ ನೀಡಿದ ಕೊಡುಗೆಗಳನ್ನು ಮರೆಯಲು ಅಸಾಧ್ಯ. ವಿಧವಾ ವೇತನ, ಮಾಸಾಶನ, ದೇಶದ ಏಕತೆ, ಸೌಹಾರ್ದ ಮತ್ತು ಕ್ರಾಂತಿಕಾರಿ ಬದಲಾವಣೆ ಮೂಲಕ ಜನಮಾನಸದಲ್ಲಿ ನೆಲೆಯೂರಿದ ದಿಟ್ಟ ಮಹಿಳೆ ಎಂದರು.

ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷಮುರಳೀಧರ ರೈ ಮಠಂತಬೆಟ್ಟು ಸಹಿತ ಹಲವು ಮುಖಂಡರು ಸಭೆಯಲ್ಲಿ ಮಾತನಾಡಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆ ವಹಿಸಿದ್ದರು.ಪಟ್ಟಣ ಪಂಚಾಯತಿ ಸದಸ್ಯಆಶ್ರಫ್ ವಿಟ್ಲ, ದಿನಕರ ಆಳ್ವ , ಕೇಶವ ನಾಯ್ಕ್,, ಕೃಷ್ಣ ಭಟ್ , ಅಬ್ದುಲ್ ಖಾದರ್, ಎಲ್ಯಣ ಪೂಜಾರಿ, ಶ್ರೀಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯತಿ ಕಾಂಗ್ರೆಸ್ ಸದಸ್ಯರು,ಪಕ್ಷದ ನಾಯಕರು, ಮುಖಂಡರು, ವಿವಿಧ ಘಟಕದ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮೋಹನ ಗುರ್ಜಿನಡ್ಕ ಸ್ವಾಗತಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *