Breaking
23 Mar 2026, Mon

ಅಲ್ಪಕಾಲದ ಅಸೌಖ್ಯದಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ. 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು , ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ ಅವರು ನೆರಿಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ , ಕರ್ನಾಟಕ ಸರ್ಕಾರದ ಭೂ ನ್ಯಾಯ ಮಂಡಳಿ ಮಾಜಿ ಸದಸ್ಯರಾಗಿ , ಮಲೆಕುಡಿಯ ಸಮುದಾಯದ ಹಿರಿಯ ಸದಸ್ಯರಾಗಿ , ಕೊಯ್ಯುರು ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ , ಪುತ್ರ, ಸೊಸೆಯಂದಿರು , ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನೀಲಯ್ಯ ಮಲೆಕುಡಿಯರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೆಸ್ಕಾಂ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಮಾಜಿ ಸಚಿವ ಗಂಗಾಧರ ಗೌಡ , ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗೇಶ್ ಗೌಡ , ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ , ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *