Breaking
23 Mar 2026, Mon

ಬಿಎಂಡಬ್ಲ್ಯೂ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಬಳಿ ಬಿಎಂಡಬ್ಲ್ಯೂ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಬ್ಬರು ಮೃತಪಟ್ಟಿರುವಂತಹ ಘಟನೆ ಜ. 19 ರಂದು ನಡೆದಿದೆ.

ಮೃತಪಟ್ಟಿರುವವರನ್ನು ಸಜಿಪ ಬೈಲಗುತ್ತುವಿನ 41 ವರ್ಷದ ಆಸಿಫ್ ಮುಹಮ್ಮದ್, ನಾಟೆಕಲ್ ನಿವಾಸಿ 23 ವರ್ಷದ ಶಫೀಕ್ ಎಂದು ಗುರುತಿಸಲಾಗಿದೆ.

ವಯನಾಡಿಗೆ ತೆರಳಿದ್ದ ಐವರು ಗೆಳೆಯರು ಜ.19 ರಂದು ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಸಿಫ್ ಸ್ಥಳದಲ್ಲೇ ಮೃತಪಟ್ಟಿದ್ದು, ಶಫೀಕ್ ಚಿಕಿತ್ಸೆ ಫಲಕಾರಿಯಾಗದೇ ಇಂದು(ಜ.20) ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಮಂಜೇಶ್ವರ ಮೂಲದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಲಾರಿಗೂ ಹಾನಿಯಾಗಿದೆ.

Leave a Reply

Your email address will not be published. Required fields are marked *