Breaking
10 May 2026, Sun

ಸರಕು ಸಾಗಾಟದ ವಾಹನದಲ್ಲಿ ಗಾಂಜಾ ಸಾಗಾಟ: ಇಬ್ಬರು ಅರೆಸ್ಟ್

ಪುತ್ತೂರು: ಕಾರು ಮತ್ತು ಅಶೋಕ್ ಲೇಲ್ಯಾಂಡ್ ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಜ. 19 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ (37) , ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ.

ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜನ್‌ಕಾಡಿನ ಬಳಿ ಶಂಕಿತ ಕಾರು ಮತ್ತು ಸರಕು ಸಾಗಣೆ ವಾಹನವನ್ನು ತಡೆದು ತಪಾಸಣೆ ನಡೆಸಿದ ವೇಳೆ ಕಾರಿನ ಚಾಲಕ ನಡವಳಿಕೆ ಅನುಮಾನಾಸ್ಪದವಾಗಿದ್ದರಿಂದ ಪೊಲೀಸರು ಕಾರಿನಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಅಕ್ರಮ ವಸ್ತುಗಳ ಮೌಲ್ಯ ಸುಮಾರು 53,03,000 ರೂ. ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳಿಂದ ಪೊಲೀಸರು ಗಾಂಜಾ, ಸಾಗಣೆಗೆ ಬಳಸಿದ ವಾಹನಗಳು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *