ಚಾಮರಾಜನಗರ: ಹನೂರು ತಾಲೂಕಿನ ಪೆದ್ದನಪಾಳ್ಯದಲ್ಲಿ ಮೇವು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಮೇವು ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ರೈತ ಸಿದ್ದರಾಜು ಅವರು ಮೇವು ಖರೀದಿಸಿ, ಲಾರಿಯಲ್ಲಿ ತುಂಬಿಕೊಂಡು ಊರಿಗೆ ತೆರಳುತ್ತಿದ್ದ ವೇಳೆ, ಮಾರ್ಗಮಧ್ಯೆದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೇವಿಗೆ ಬೆಂಕಿ ಹತ್ತಿಕೊಂಡಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಲಾರಿಯಲ್ಲಿದ್ದ ಮೇವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.




